Kanakadasa biography in kannada language learning
Kannada cinema!
ಕನಕದಾಸರು
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು.
Kanakadasa biography in kannada language learning
ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
ಜೀವನ
ಜನನ
ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಹಿಂದೂ ಕುರುಬ/ನಾಯಕ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು.
15 - 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು.
Kanakadasa biography in kannada language learning in english
ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.
ಐತಿಹ್ಯ
ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹ